ವಿಶ್ವಾಸ ಮತಯಾಚನೆಯಲ್ಲಿ ಗೆಲ್ಲುವ ಬಗ್ಗೆ ನಮಗೆ ಯಾವುದೇ ಭಯವಿಲ್ಲ : ಎಂ.ಪಿ ರೇಣುಕಾಚಾರ್ಯ…

412
firstsuddi

ಬೆಂಗಳೂರು : ಡಾಲರ್ಸ್ ಕಾಲೋನಿಯಲ್ಲಿರುವು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು, ಸೋಮವಾರ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಲಿರುವ ವಿಶ್ವಾಸ ಮತಯಾಚನೆಯಲ್ಲಿ ಗೆಲ್ಲುವ ಬಗ್ಗೆ ನಮಗೆ ಯಾವುದೇ ಭಯವಿಲ್ಲ. ನಾವು ವಿಶ್ವಾಸ ಮತಯಾಚನೆಯಲ್ಲಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇವೆ. ಸರ್ಕಾರಕ್ಕೆ ಯಾವುದೇ ಅಡಚಣೆಯುಂಟಾಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸಂಪುಟಕ್ಕೆ ಯಾರನ್ನೂ ತೆಗೆದುಕಳ್ಳಬೇಕು, ಯಾರಿಗೆ ಯಾವಾ ಖಾತೆಯನ್ನು ನೀಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದರು.