ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್…

43
firstsuddi

ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ.

ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ. ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಕರಗ ಉತ್ಸವ ಸಂಬಂಧ ನಿನ್ನೆ ಸಭೆ ನಡೆದಿತ್ತು. ಈ ಸಭೆಯಲ್ಲಿ ದಿನಾಂಕ ಫಿಕ್ಸ್ ಮಾಡಲಾಗಿದೆ. ಜೊತೆಗೆ ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ಕರಗ ಹೊರಲು ಜ್ಞಾನೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಿದೆ. ಯಾವುದೇ ಸಮಸ್ಯೆಯಾಗದಂತೆ ಶಾಸ್ತ್ರೋಕ್ತವಾಗಿ ಕರಗ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.