ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆ…

81
firstsuddi

ಬೆಳಗಾವಿ : ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಬೋರಗಲ್ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಗುರುತಿಸಲಾಗಿದೆ.

ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ಮನನೊಂದಿದ್ದ ಗೋಪಾಲ್ ಅವರು ನೀರಿನಲ್ಲಿ ವಿಷ ಬೆರಸಿ ತನ್ನ ಮಕ್ಕಳೊಂದಿಗೆ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ನಿನ್ನೆ ರಾತ್ರಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ  ಎಂದು ತಿಳಿದುಬಂದಿದೆ.

ಗೋಪಾಲ್ ಅವರ ಇಬ್ಬರು ಮಕ್ಕಳು ಸಂಕೇಶ್ವರ ಪಟ್ಟಣದಲ್ಲಿರುವ ಕಾಲೇಜಿಗೆ ಹೋಗುತ್ತಿದ್ದರು. ಇನ್ನೂಳಿದ ಇಬ್ಬರು ಮಕ್ಕಳು ಗ್ರಾಮದಲ್ಲೇ ಶಾಲೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.