ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶನಿವಾರ ಮತ್ತು ಭಾನುವಾರ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ. ಇದೀಗ ನಮ್ಮ ಮೆಟ್ರೋ ಓಡಾಟದಲ್ಲೂ ಕೂಡ ಬದಲಾವಣೆ ಆಗಲಿದೆ.
ಶನಿವಾರ ಮತ್ತು ಭಾನುವಾರದಂದು ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಇಂದು ಸಂಜೆ 7.30 ರಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಮೆಟ್ರೋ ರೈಲು ಸಂಚರಿಸುವುದಿಲ್ಲ. ಇಂದು ಸಂಜೆ 7.30ಕ್ಕೆ ಮೈಸೂರು ರಸ್ತೆ, ಬೈಯಪ್ಪನಹಳ್ಳಿ, ನಾಗಸಂದ್ರ ಮತ್ತು ಸಿಲ್ಕ್ ಸಂಸ್ಥೆಯಿಂದ ಕೊನೆಯ ರೈಲು ಹೊರಡಲಿದೆ. ಎಂದು ನಮ್ಮ ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.










