ದೊಡ್ಡಬಳ್ಳಾಪುರ : ಬೈಕ್ ವೀಲಿಂಗ್ ಮಾಡುತ್ತಿದ್ದ ವೇಳೆ ಜೆಸಿಬಿಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊಸಹುಡೆ ಗ್ರೇಟ್ ಬಳಿಯ ಕಂಟ್ರಿ ಕ್ಲಬ್ ಮುಂಭಾಗ ನಡೆದಿದೆ. ಮೃತರನ್ನು ಬೆಂಗಳೂರಿನ ಮತ್ತೀಕೆರೆ ನಿವಾಸಿಗಳಾದ ಸೈಯದ್(20) ಹಾಗೂ ಅರ್ಬಾಸ್ (22) ಎಂದು ಗುರುತಿಸಲಾಗಿದೆ. ಮೃತರು ನಿನ್ನೆ ಸಂಜೆ ಬೈಕ್ ವೀಲಿಂಗ್ ಮಾಡುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಜೆಸಿಬಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದು, ಬೈಕ್ ಸವಾರ ನಿಯಂತ್ರಣ ತಪ್ಪಿ ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










