ವೀಲ್ಹಿಂಗ್: ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ.

23

ಬೆಂಗಳೂರು: ನಗರದಲ್ಲಿ ಇಪ್ಪತ್ತರ ಆಸುಪಾಸಿನ ಹದಿಹರೆಯದ ಯುವಕರು, ಹಿಂಬದಿಯಲ್ಲಿ ಇಬ್ಬರನ್ನು ಕೂರಿಸಿಕೊಂಡು ತ್ರಿಬಲ್ ಬೈಕ್ ರೈಡಿಂಗ್ ಮಾಡುವುದು, ಕೆಲವರು ಪೊಲೀಸರ ಭಯವಿಲ್ಲದೆ ವೀಲ್ಹಿಂಗ್ ಮಾಡುವುದರಿಂದ ಭಾರೀ ಅನಾಹುತ ಉಂಟಾಗುತ್ತಿದೆ. ಅಲ್ಲದೇ ಅಪಘಾತಗಳು ಮತ್ತು ಸಾವುಗಳು ಸಂಭವಿಸುತ್ತಿವೆ ಎಂದು ಹೈಕೋರ್ಟ್ ಬುಧವಾರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈ ಸಂಬಂಧ ಶಿವಮೊಗ್ಗದ ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜಿನ ಸೈಕಾಲಜಿ ವಿಭಾಗದ ಸಹ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ.ಅರ್ಚನಾ ಭಟ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಈಗ ಅನುಷ್ಟಾನಗೊಳಿಸಿರುವ ಕಾನೂನುಗಳ ಕುರಿತು ಸರ್ಕಾರ ಮಾ.17ರೊಳಗೆ ತನ್ನ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಹೇಳಿ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತು.