ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಮಾನಸ ಪ್ರಶಸ್ತಿ ಸಮ್ಮಾನ…

129
firstsuddi

ಚಾಮರಾಜನಗರ : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಮಾನಸ ಶಿಕ್ಷಣ ಸಂಸ್ಥೆಯ ಆರ್. ಸಿದ್ದೇಗೌಡ-ಲಿಂಗಮ್ಮ ಸ್ಮರಣಾರ್ಥ ಮಾನಸ ಪ್ರಶಸ್ತಿ-2019 ಅನ್ನು ನೀಡಲಾಗುತ್ತಿದೆ. ಈ ಬಾರಿ ಮಾನಸ ಪ್ರಶಸ್ತಿ ಕಾರ್ಯಕ್ರಮ ಇದೇ 27ರಿಂದ 29ರವರೆಗೆ ಕೊಳ್ಳೇಗಾಲದ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಲಿದ್ದು, 27ರ ಬೆಳಿಗ್ಗೆ 10 ಗಂಟೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಉಳಿದ 3ದಿನಗಳ ಕಾಲ ಕಾಲೇಜಿನ ವಿದ್ಯಾರ್ಥಿಗಳು, ಚಿತ್ರನಟರು ಸಾಂಸ್ಕøತಿಕ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.