ವೇಶ್ಯಾವಾಟಿಕೆ ಆರೋಪ : ರಾಜೇಶ್ವರಿ ಶೆಟ್ಟಿ ಮೇಲೆ ಕೇಸ್ – ಮೂವರ ಬಂಧನ…

103
Firstsuddi

ಉಡುಪಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಹೋಮಕುಂಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಯ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದು, ಮೂವರು ಆರೋಪಿಗಳನ್ನು ಬಂಧೀಸಿದ್ದಾರೆ.

ಬಂಧಿತ ಆರೋಪಿಗಳನ್ನು ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಆರೋಪಿಗಳಾದ ಶೇಖರ ಶೆಟ್ಟಿ , ಮನು, ರಾಜು, ಜೋನ್ಸನ್ ಡಿ ಅಲ್ಮೇಡ ಮತ್ತು ರಾಜೇಶ್ವರಿ ಶೆಟ್ಟಿ ಎಂಬವರು ಒಟ್ಟು ಸೇರಿ ಹೊಟೇಲಿನ ರೂಂನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಹೊಟೇಲಿಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ಕೃತ್ಯಕ್ಕೆ ಸಂಬಂಧಿಸಿದ 4 ಮೊಬೈಲ್ ಫೋನ್, ನಗದು 6730 ರೂ., ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜೇಶ್ವರಿ ಶೆಟ್ಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಯವರ ಪತ್ನಿಯಾಗಿದ್ದು, ಈಕೆಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಭಾಸ್ಕರ್ ಶೆಟ್ಟಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ಧಳು. ಈಗ ರಾಜೇಶ್ವರಿ ಶೆಟ್ಟಿ ಮಾಲಕತ್ವದ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.