ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಸ್ಪ್ರೀತ್ ಬುಮ್ರಾ – ಸಂಜನಾ ಗಣೇಶನ್.

181
Firstsuddi

ಗೋವಾ : ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಖ್ಯಾತ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೋವಾದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು, ಕೋವಿಡ್ ಕಾರಣದಿಂದಾಗಿ ಕೆಲವೇ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಮಾತ್ರ ವಿವಾಹಕ್ಕೆ ಆಹ್ವಾನ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಬುಮ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಅದರ ಫೋಟೋಗಳನ್ನುತಮ್ಮ ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ.

ಪ್ರಖ್ಯಾತ ಕ್ರೀಡಾ ನಿರೂಪಕಿ ಆಗಿರುವ ಸಂಜನಾ ಗಣೇಶನ್ ಅವರು ಮೂಲತಃ ಪುಣೆಯವರು. 2014ರ ಮಿಸ್ ಇಂಡಿಯಾ ಫೈನಲಿಸ್ಟ್ ಆಗಿದ್ದರು. ಇದಾದ ಬಳಿಕ ಸ್ಟಾರ್ ಸ್ಪೋರ್ಟ್ಸ್ ಗೆ ಕ್ರೀಡಾ ನಿರೂಪಕಿಯಾಗಿ ಸೇರ್ಪಡೆಯಾಗಿದ್ದಾರೆ. 2014ರಲ್ಲಿ ಎಂಟಿವಿಯ ರಿಯಾಲಿಟಿ ಶೋ ಒಂದರಲ್ಲಿ ಸಂಜನಾ ಭಾಗವಹಿಸಿದ್ದರು. 2019ರ ಕ್ರಿಕೆಟ್ ವಿಶ್ವಕಪ್ ವೇಳೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು.