ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನ ಮೂಲದ ಡ್ರೋನ್ ಅನ್ನು ಹೊಡೆದುರುಳಿಸಿದ ಭಾರತೀಯ ಯೋಧರು…

219
firstsuddi

ಜಮ್ಮು ಕಾಶ್ಮೀರ : ಡ್ರೋನ್ ಮೂಲಕ ಭಾರತದ ಗಡಿಯೊಳಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನ ಮೂಲದ ಡ್ರೋನ್ ಅನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಚೀನಾ ಮೂಲದ DJI Mavic 2 Pro  ಕಂಪನಿ ನಿರ್ಮಿತ ಪಾಕಿಸ್ತಾನದ ಕ್ವಾಡ್ ಕಾಪ್ಟರ್ ಡ್ರೋನ್ ಅನುಮಾನಾಸ್ಪದವಾಗಿ ಹಾರಾಡುತ್ತಿತ್ತು. ಇದನ್ನು ಗಮನಿಸಿದ ಯೋಧರು ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ.