ಶಾಲಾ ಆವರಣದಲ್ಲಿ ಶಸ್ತ್ರಾಸ್ತ್ರ ತರಬೇತಿ – ಪಿಎಫ್‍ಐನಿಂದ ದೂರು ಸಲ್ಲಿಕೆ…

82
firstsuddi

ಕೊಡಗು : ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರು ಪೊನ್ನಂಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ವಿರಾಜಪೇಟೆ ಶಾಸಕ ಕೆ.ಜಿ.ಬೋಪ್ಪಯ್ಯ, ಸೋಮವಾರಪೇಟೆ ಶಾಸಕ ಅಪ್ಪಚ್ಚು ರಂಜನ್, ಎಂಎಲ್ಸಿ ಸುಜಾ ಕುಶಾಲಪ್ಪ, ರಘು ಸಕಲೇಶಪುರ ಗಣಪತಿ ಹಾಗೂ ಸಾಯಿ ಶಂಕರ ಶಾಲೆ ವಿರುದ್ಧ ದೂರು ಸಲ್ಲಿಸಲಾಗಿದೆ.

ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಈ ಮೂಲಕ ಭಯೋತ್ಪಾದನೆಗೆ ತರಬೇತಿ ನೀಡಲಾಗುತ್ತಿದೆ ಎಂದು ಎಸ್​​ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳು ಆರೋಪಿಸಿವೆ. ಅಲ್ಲದೇ ಇವರ ವಿರುದ್ಧ ಭಯೋತ್ಪಾದನೆ ಕೃತ್ಯಕ್ಕೆ ಸಂಚು ಪ್ರಕರಣ ದಾಖಲಿಸಿ ಸೂಕ್ತ  ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.