ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ 10 ನಿಮಿಷ ಧ್ಯಾನ ಕಡ್ಡಾಯ : ಸಚಿವ ನಾಗೇಶ್ ಪತ್ರ…

56
firstsuddi

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಡ್ಡಾಯವಾಗಿ ಧ್ಯಾನದ ಅಭ್ಯಾಸ ಮಾಡಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಸಚಿವರು, ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಮಕ್ಕಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆ ದೃಷ್ಟಿಯಿಂದ ಸಚಿವರು ಮನವಿಗೆ ಸ್ಪಂದಿಸಿದ್ದಾರೆ.