ಶಾಲಾ ಪ್ರವಾಸಕ್ಕೆಂದು ಬಂದಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಸಾವು-10ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ…

443
firstsuddi

ಧಾರವಾಡ : ಶಾಲಾ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾ ಸಮೀಪ ನಡೆದಿದೆ. ಭಾಷಾ ಫಕ್ರುದ್ದೀನ್(14) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಆಂಧ್ರ ಪ್ರದೇಶದ ಕದ್ರಿ ಅನಂತಪುರ ಜಿಲ್ಲೆಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಖಾಸಗಿ ಬಸ್‍ನಲ್ಲಿ ಒಟ್ಟು 45ಮಂದಿ ವಿದ್ಯಾರ್ಥಿಗಳು, 9ಮಂದಿ ಶಿಕ್ಷಕರು ಹಾಗೂ 4ಮಂದಿ ಅಡುಗೆ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಈ ವೇಳೆ ಗೇರುಸೊಪ್ಪು ಸಮೀಪದ ಸೂಳೆಮರ್ಕಿ ಕ್ರಾಸ್ ಬಳಿ ಸುಮಾರು 500 ಅಡಿ ಎತ್ತರದಿಂದ ಬಸ್ ಕಂದಕ್ಕೆ ಉರುಳಿದ್ದು, ಪರಿಣಾಮ 10ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಭಾಷಾ ಫಕ್ರುದ್ದೀನ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದು, ಶಿಕ್ಷಕರೊಬ್ಬರ ಕೈ ಮುರಿದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹೊನ್ನಾವರ ಪಿಎಸೈ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಸ್ಥಳೀಯ ಭೇಟಿ ನೀಡಿ ಗಾಯಾಳುಗಳನ್ನೆಲ್ಲಾ ರಕ್ಷಣೆ ಮಾಡಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಸಣ್ಣ ಪುಟ್ಟ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.