ಶಾಲಾ ಬಸ್‍ಗಳ ಭೀಕರ ಅಪಘಾತ – 15 ವಿದ್ಯಾರ್ಥಿಗಳು ಸಾವು…

59
firstsuddi

ಇಂಫಾಲ : ಶಾಲಾ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಎರಡು ಬಸ್ ಗಳು ಇಂದು ಬೆಳಗ್ಗೆ ಮಣಿಪುರದ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವರದಿಗಳ ಪ್ರಕಾರ, ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದವು. ಬಸ್ ಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಹೋಗುತ್ತಿದ್ದವು. ಈ ವೇಳೆ ಬಸ್ ಗಳ ನಿಯಂತ್ರಣ ತಪ್ಪಿ ಭೀಕರ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಹಳೇ ಕ್ಯಾಚಾರ್ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ. ಎಸ್ ಡಿಆರ್ ಎಫ್, ವೈದ್ಯಕೀಯ ತಂಡ ಮತ್ತು ಶಾಸಕರು ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸಲು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್ ನಲ್ಲಿರುವ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.