ಶಾಲಾ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ಯುವಕ.

61
firstsuddi

ಲಕ್ನೋ : ಮುಸ್ಲಿಂ ಯುವಕನೊಬ್ಬ 28 ವರ್ಷದ ಶಾಲಾ ಶಿಕ್ಷಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.

ಆರೋಪಿ ಅಮೀರ್ ಸೇರಿದಂತೆ ಐವರ ವಿರುದ್ಧ ಉತ್ತರ ಪ್ರದೇಶದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ.

ಮೇ 4 ರಂದು ಮಹಿಳೆ ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಅದೇ ಗ್ರಾಮದ ಅಮೀರ್, ಡ್ರಾಪ್ ಮಾಡುವುದಾಗಿ ಕರೆದೊಯ್ದಿದ್ದಾನೆ. ಬಳಿಕ ಮೂಗಿಗೆ ಮತ್ತಿನ ಔಷಧವನ್ನಿಟ್ಟು ಪ್ರಜ್ಞೆ ತಪ್ಪುವಂತೆ ಮಾಡಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಅತ್ಯಾಚಾರದ ವೀಡಿಯೋ ಚಿತ್ರೀಕರಣ ಮಾಡಿದ್ದು, ಮತಾಂತರವಾಗಿ ತನ್ನನ್ನೇ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಜೊತೆಗೆ ಅಮೀರ್ ಕುಟುಂಬ ಸದಸ್ಯರೂ ಸಹ ಮತಾತಂತರವಾಗಿ ಆತನನ್ನೇ ಮದುವೆಯಾಗುವಂತೆ ಒತ್ತಾಯಿಸಿದ್ದರೆಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.