ವಾಷಿಂಗ್ಟನ್ : 15 ವರ್ಷದ ವಿದ್ಯಾರ್ಥಿ ನಡೆಸಿದ ಗುಂಡಿನ ದಾಳಿಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಮಿಚಿಗನ್ ಹೈಸ್ಕೂಲ್ ನಲ್ಲಿ ನಡೆದಿದೆ.
ಮಧ್ಯಾಹ್ನ ಆಕ್ಸ್ಫರ್ಡ್ ಪ್ರೌಢಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದಾಗ ನಡೆಸಿದ ಗುಂಡಿನ ದಾಳಿಯಲ್ಲಿ ಶಾಲಾ ಶಿಕ್ಷಕ ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಓಕ್ಲ್ಯಾಂಡ್ ಕೌಂಟಿ ಶೆರಿಫ್ ಕಚೇರಿ ತಿಳಿಸಿದೆ. ವಿದ್ಯಾರ್ಥಿಯನ್ನು ಅಧಿಕಾರಿಗಳು ಬಂಧಿಸಿದ್ದು, ಗನ್ ವಶಪಡಿಸಿಕೊಂಡಿದ್ದಾರೆ .
ಈ ಘಟನೆಯ ಕುರಿತು ಬೇಸರ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ತಮ್ಮ ಪ್ರೀತಿಯ ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬದ ದುಃಖದಲ್ಲಿ ನಾನೂ ಭಾಗಿ ಎಂದು ಹೇಳಿದ್ದಾರೆ.










