ಶಾಸಕರನ್ನು ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸಬೇಕೆಂದು ಮನವಿ ಮಾಡುತ್ತೇನೆ : ಸಿದ್ದರಾಮಯ್ಯ…

217
firstsuddi

ಬೆಂಗಳೂರು : ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದು, ರಾಜೀನಾಮೆ ನೀಡಿರುವ ಎಲ್ಲಾ ಶಾಸಕರು ಬಿಜೆಪಿಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಹೀಗಾಗಿ ಸ್ಪೀಕರ್ ರಾಮೇಶ್ ಕುಮಾರ್ ಅವರಿಗೆ ಶಾಸಕರನ್ನು ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸಬೇಕೆಂದು ಮನವಿ ಮಾಡುತ್ತೇನೆ. ನಮ್ಮ ಕೆಲವು ಶಾಸಕರು ಬಿಜೆಪಿಯ ಚಕ್ರವ್ಯೂಹದಲ್ಲಿ ಸಿಲುಕಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ಬಿಟ್ಟು ಬೇರೆ ಎಲ್ಲಾ ಶಾಸಕರು ಶಾಸಕಾಂಗ ಸಭೆಯಲ್ಲಿ ಭಾಗಿಯಾಗಿದ್ದರು. ಅತೃಪ್ತ ಶಾಸಕರೆಲ್ಲರೂ ನಿಮ್ಮ ರಾಜೀನಾಮೆಯನ್ನು ಹಿಂಪಡೆದು ವಾಪಾಸ್ ಬನ್ನಿ ಎಂದು ಹೇಳುತ್ತಿದ್ದೇನೆ. ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.