ಶಾಸಕರು ರಾಜೀನಾಮೆ ನೀಡುವ ವಿಷಯ ನನಗೆ ಗೊತ್ತಿಲ್ಲ : ಹೆಚ್.ಡಿ. ದೇವೇಗೌಡ…

224
firstsuddi

ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇಂದು 11 ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ್ದು, ಶಾಸಕರು ರಾಜೀನಾಮೆ ನೀಡುವ ವಿಷಯ ನನಗೆ ಗೊತ್ತಿಲ್ಲ. ಜೆಡಿಎಸ್ ಶಾಸಕರು ಯಾಕೆ ರಾಜೀನಾಮೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಅಲ್ಲದೇ ನನಗೆ ರಾಜೀನಾಮೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ನಾನು ನಮ್ಮ ಶಾಸಕರ ಬಳಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.