ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್ ಅಮಾನತು ಆದೇಶ ವಾಪಸ್ ಪಡೆದ ಬಿಜೆಪಿ.

60
firstsuddi

ಚಿತ್ರದುರ್ಗ : ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಬಿಜೆಪಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಪತಿ ಡಿ.ಟಿ ಶ್ರೀನಿವಾಸ್ ಅವರ ಅಮಾನತು ಆದೇಶವನ್ನು ಹಿಂಪಡೆದಿದೆ.

ಕಳೆದ ಎರಡೂವರೆ ವರ್ಷಗಳ ಹಿಂದೆ ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಡಿ.ಟಿ.ಶ್ರೀನಿವಾಸ್ ಅವರನ್ನು ಅಕ್ಟೋಬರ್ 23, 2020ರಂದು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ಆದರೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ನಿಷ್ಠೆಯಿಂದ ಶ್ರಮಿಸಲಿ ಎಂಬ ಸದುದ್ದೇಶದಿಂದ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಆದೇಶದಿಂದಾಗಿ ಫುಲ್ ಆಕ್ಟೀವ್ ಆಗಿರುವ ಶ್ರೀನಿವಾಸ್ ತಮ್ಮ ಪತ್ನಿ ಬೆನ್ನಿಗೆ ನಿಂತಿದ್ದು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹಾಗೆಯೇ ಶ್ರೀನಿವಾಸ್ ರೀ ಎಂಟ್ರಿ ಬಿಜೆಪಿಗೆ ಆನೆಬಲ ಬಂದಂತಾಗಿದೆ.