ಶಾಸಕಿ ಸೌಮ್ಯ ರೆಡ್ಡಿಗೆ ಕೊರೊನಾ ಪಾಸಿಟಿವ್…

131
firstsuddi

ಬೆಂಗಳೂರು : ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿಯವರಿಗೆ ಕೊರೋನಾ ಸೋಂಕು ತಗಲಿದ್ದು, ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

ನನಗೆ ಕೋವಿಡ್-19 ಪಾಸಿಟಿವ್ ಇರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಎರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೂಡ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ, ಎಂದು ಶಾಸಕಿ ಸೌಮ್ಯಾ ರೆಡ್ಡಿ ಅವರು ಮನವಿ ಮಾಡಿಕೊಂಡಿದ್ದಾರೆ.