ಶಾಸಕ ಜಮೀರ್​ಗೆ ಎಸಿಬಿ ಶಾಕ್ – ಮನೆ, ಕಚೇರಿ ಸೇರಿ 5 ಕಡೆ ದಾಳಿ…

66
firstsuddi

ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 5 ಕಡೆಗಳಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಈ ಹಿಂದೆ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ, ಭವ್ಯ ಮನೆ ನಿರ್ಮಾಣ, ಐಎಂಎ ಕೇಸಲ್ಲಿ ಜಮೀರ್ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆದಿತ್ತು. ಸುಮಾರು 24 ಗಂಟೆಗಳ ಕಾಲ ಜಮೀರ್ ಮನೆಯಲ್ಲಿ ಶೋಧ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಳಿಕ ಈ ಬಗ್ಗೆ ತನಿಖೆ ನಡೆಸಿ ಎಸಿಬಿಗೆ ಒಂದು ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಇಡಿ ರಿಪೋರ್ಟ್ ಬೆನ್ನಲ್ಲೆ ಇದೀಗ ಜಮೀರ್ ಅಹ್ಮದ್ ಮನೆ, ಕಚೇರಿ, ಪ್ಲಾಟ್ ಸೇರಿ ಐದು ಕಡೆ ಎಸಿಬಿ ದಾಳಿ ನಡೆಸಿದೆ.

ಕಂಟೋನ್ಮೆಂಟ್ ರೈಲ್ವೇ ವಲಯದಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ ನಲ್ಲಿರುವ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ.