ಶಾಸಕ ವಿಶ್ವನಾಥ್ ಕೊಲೆ ಸ್ಕೆಚ್ ಪ್ರಕರಣ : ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾದ ಗೋಪಾಲಕೃಷ್ಣ.

75
firstsuddi

ಬೆಂಗಳೂರು : ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಹಿನ್ನಲೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಪ್ರಕರಣದ ವಿಚಾರಣೆಗಾಗಿ ನಗರದ ಪೊಲೀಸ್ ಠಾಣೆಗೆ ಗೋಪಾಲಕೃಷ್ಣ ಹಾಜರಾಗಿದ್ದಾರೆ.

ಶಾಸಕರ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತು ಕುಳ್ಳದೇವರಾಜು ವಿರುದ್ಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇಂದು ವಿಚಾರಣೆಗಾಗಿ ಗೋಪಾಲಕೃಷ್ಣರನ್ನು ರಾಜಾನುಕುಂಟೆ ಪೊಲೀಸ್ ಠಾಣೆಗೆ ಕರೆದಿದ್ದರು. ಅದರಂತೆ ಬೆಳಿಗ್ಗೆ 9 ಗಂಟೆಗೆ ಗೋಪಾಲಕೃಷ್ಣ ಪೊಲೀಸ್ ಠಾಣೆಗೆ ತೆರಳಿದ್ದಾರೆ.

ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ನಾಗರಾಜ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಪ್ರಕರಣದ ಆರೋಪಿಯಾಗಿರುವ ಗೋಪಾಲಕೃಷ್ಣರನ್ನ ಸುದೀರ್ಘ ವಿಚಾರಣೆ ಮಾಡುವ ಸಾಧ್ಯತೆ ಇದೆ.

ಗುರುವಾರ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದ ಕುಳ್ಳ ದೇವರಾಜ್ ಅವರನ್ನು ಎರಡನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ಮಂಜೂರು ಮಾಡಲಾಗಿದೆ.