ಬೆಂಗಳೂರು : ದಿನದಿಂದ ದಿನಕ್ಕೆ ರಾಜೀನಾಮೆ ನೀಡುವ ಶಾಸಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಸ್ಪೀಕರ್ ಕಚೇರಿಗೆ ಭೇಟಿ ನೀಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಸ್ಪೀಕರ್ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ರಾಜೀನಾಮೆಯನ್ನು ಕೊಟ್ಟಿದ್ದೇನೆ. ಇನ್ನೂ ಬೇರೇನು ಹೇಳುವುದಕ್ಕೆ ಇಷ್ಟ ಪಡುವುದಿಲ್ಲ ಎಂದು ಹೇಳಿದ್ದಾರೆ.










