ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಜನಪ್ರಿಯ ನಟಿ ಕೀರ್ತಿ ಸುರೇಶ್.

11

ಮಹಾನಟಿ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ವಿಭಿನ್ನ ಸ್ಟಾರ್‍ಡಮ್ ಹೊಂದಿರುವ ನಟಿ ಕೀರ್ತಿ ಸುರೇಶ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಬಹುಕಾಲದ ಗೆಳೆಯ, ಉದ್ಯಮಿ ಆಂಟೋನಿ ಥಟ್ಟಿಲ್ ಅವರೊಂದಿಗೆ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ್ದಾರೆ. ಸೌತ್ ಸ್ಟಾರ್ ನಟಿಯಾಗಿರುವ ಕೀರ್ತಿ ಸುರೇಶ್ ಅವರು ತಮ್ಮ ಆಂಟೋನಿ ಥಟ್ಟಿಲ್ ಅವರನ್ನು ಸರಿಸುಮಾರು 15 ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸದ ಸಂದರ್ಭ ಹುಟ್ಟಿದ ಪ್ರೇಮ್ ಕಹಾನಿ ಇದು. ಫೈನಲಿ ತಮ್ಮ ಪ್ರೇಮಸಂಬಂಧಕ್ಕೆ ಮದುವೆ ಎಂಬ ಅಧಿಕೃತ ಮುದ್ರೆ ಒತ್ತಿದ್ದಾರೆ. ಗೋವಾದಲ್ಲಿ ಹಸೆಮಣೆ ಏರಿ ತಮ್ಮ ಜೀವನದುದ್ದಕ್ಕೂ ಪರಸ್ಪರರ ಸಾಥ್ ನೀಡುವುದಾಗಿ ಪ್ರಮಾಣ ಮಾಡಿಕೊಂಡಿದ್ದಾರೆ.