ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ…

45
firstsuddi

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಜಿಲ್ಲೆಯ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತಕ್ಕೀಡಾಗಿದೆ.

ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದಾಗ ನಿನ್ನೆ ತಡರಾತ್ರಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸಚಿವರಿಗೆ ಏನೂ ಸಮಸ್ಯೆಯಾಗಿಲ್ಲ.

ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಚಿವ ಮಧು ಬಂಗಾರಪ್ಪ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಕಾರನ್ನು ಉಜ್ಜಿಕೊಂಡು ಹೋಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಅಪಘಾತದ ಬಳಿಕ ಸಚಿವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.

ಈ ಕುರಿತು ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.