ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ ಆತ್ಮಹತ್ಯೆಗೆ ಶರಣಾದ ಚಾಲಕ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಶಾಸಕ ಡಾ. ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ನಿವಾಸದಲ್ಲೇ ಸುನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ಜು ಮೃತ ಸುನಿಲ್ ಅವರು ಶಾಸಕ ಚಂದ್ರು ಅವರ ಸಂಬಂಧಿ ಎಂದು ತಿಳಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರವಾದ ಕಾರಣ ತಿಳಿಸಲಾಗಿಲ್ಲ. ಯಾವುದೇ ಡೆತ್‍ನೋಟ್ ಸಹ ದೊರಕಿಲ್ಲ. ಮನೆ ಕಟ್ಟುವ ವಿಷಯದಲ್ಲಿ ಸಹೋದರರ ನಡುವೆ ಕಲಹವಾಗಿದ್ದು, ಈ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆ ಕುರಿತು ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.










