ಶಿವಮೊಗ್ಗದಲ್ಲಿ ತಾರಕಕ್ಕೇರಿದ ಹಿಜಬ್-ಕೇಸರಿ ವಿವಾದ ; ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ…

60
firstsuddi

ಶಿವಮೊಗ್ಗ : ಕೇಸರಿ ಶಾಲು, ಹಿಜಾಬ್ ವಿವಾದ ತಾರಕಕ್ಕೇರಿದೆ. ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ 4-5 ಮಂದಿಗೆ ಗಾಯಗಳಾಗಿವೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ಇನ್ನೂ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಭಗವಾನ್ ಧ್ವಜ ಹಾರಿಸಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.