ಶಿವಮೊಗ್ಗದ 1.7 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು…

74
firstsuddi

ಶಿವಮೊಗ್ಗ : ಕೊರೊನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಕಟ್ಟಡ ಕಾರ್ಮಿಕರಿಗೆ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ.

ಈ ಕುರಿತು ಇಂದು ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 1,07,286 ಕಾರ್ಮಿಕ ಫಲಾನುಭವಿಗಳ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 72,065 ಕಾರ್ಮಿಕರ ಖಾತೆಗೆ ಒಟ್ಟು 21.61 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಇದರಲ್ಲಿ 11,040 ಕಾರ್ಮಿಕರಿಗೆ ಜಮೆಗೊಳಿಸಲಾದ ಮೊತ್ತ ಅವರ ಖಾತೆಗಳು ನಿಷ್ಕ್ರೀಯವಾಗಿರುವುದರಿಂದ ಹಾಗೂ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮಾಡಿಸದೆ ಇರುವುದರಿಂದ 3.31 ಕೋಟಿ ರೂ. ಇನ್ನೂ ಜಮೆ ಆಗಿಲ್ಲ. ಯಾರ ಖಾತೆಗೆ ಹಣ ಜಮೆ ಆಗಿಲ್ಲವೂ ಅವರು ಬ್ಯಾಂಕ್ ಗೆ ಹೋಗಿ ಆಧಾರ್ ಲಿಂಕ್ ಮಾಡಬೇಕು ಎಂದು ಮಾಹಿತಿ ನೀಡಿದರು.

ಇನ್ನೂ ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಗುತ್ತದೆ. ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯ 32 ವಾರ್ಡ್ ಗಲ್ಲಿರುವ 10,850 ಫಲಾನುಭವಿಗಳಿಗೆ ಸೋಮವಾರದಿಂದ ಆಯಾ ವಾರ್ಡ್ ನಲ್ಲಿ ಆಹಾರ ಕಿಟ್ ಒದಗಿಸಲಾಗುವುದು. ಫಲಾನುಭವಿಗಳು ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಂದು ಬೆಳಗ್ಗೆ ವಿತರಣಾ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಮರುದಿನ ಆಹಾರ ಕಿಟ್ ವಿತರಣೆ ಮಾಡಲಾಗುವುದು. ಕಿಟ್ ವಿತರಣೆಗಾಗಿ 9 ತಂಡಗಳನ್ನು ರಚಿಸಲಾಗಿದೆ. 32 ಕೇಂದ್ರಗಳಲ್ಲಿ ನೋಡೆಲ್ ಅಧಿಕಾರಿಗಳ ನೇತೃತ್ವದಲ್ಲಿ ವಿತರಣೆ ಮಾಡಲಾಗುವುದು ಎಂದರು.