ಶಿವಮೊಗ್ಗ: ಹೆತ್ತ ತಾಯಿಯನ್ನೇ ಕೊಲೆಗೈದ ಮಗ…

136
firstsuddi

ಶಿವಮೊಗ್ಗ: ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

ಸುಲೋಚನಮ್ಮ (60) ಕೊಲೆಯಾದ ತಾಯಿ. ಸಂತೋಷ್ (40) ಕೊಲೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿ ಸಂತೋಷ್ ತನ್ನ ತಾಯಿಯನ್ನು ಬಡಿಗೆಯಿಂದ ತಲೆಗೆ ಹೊಡೆದು ಹತ್ಯೆ ಮಾಡಿ ಬಳಿಕ ಜಮೀನಿನಲ್ಲಿ ಮಲಗಿದ್ದ. ಪಕ್ಕದ ಮನೆಯವರು ಸುಲೋಚನಮ್ಮಗೆ ಊಟ ಕೊಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸುಲೋಚನಮ್ಮ ಅವರನ್ನು ಆಕೆಯ ಮಗನೇ ಕುಡಿಯುವ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸಂತೋಷ್‌ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಪ್ರಾರಂಭಿಸಿದ್ದಾರೆ.