ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ.

71
firstsuddi

ಬೆಳಗಾವಿ : ಜಿಲ್ಲೆಯ ಗ್ರಾಮೀಣ ಕ್ಷೇತ್ರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಲೋಕಾರ್ಪಣೆ ಮಾಡಿದ್ದಾರೆ.

ಶಿವಾಜಿ ಪ್ರತಿಮೆ ಎದುರು ನಗಾರಿ ಬಾರಿಸಿ ಪ್ರತಿಮೆಗೆ ಹೂವು ಸಮರ್ಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ್ ಜಾರಕಿಹೊಳಿ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗಿಯಾಗಿದ್ದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗಿದ್ದಾರೆ.

ಇನ್ನು ರಾಜಹಂಸಗಡ ಕೋಟೆಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಲಾಗಿದೆ. ಗಾರ್ಡನ್, ಕೋಟೆ ನವೀಕರಣ, ನೀರಿನ ವ್ಯವಸ್ಥೆ ಸೇರಿದಂತೆ ಹಲವು ಕಾರ್ಯಕ್ರಮ ಉದ್ಘಾಟಿಸಲಾಗಿದೆ.

ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಾಜಿ ಈ ದೇಶ ಕಂಡ ಅಪ್ರತಿಮ ನಾಯಕ. ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಲಾಗಿದೆ. ಹಿಂದೂ ಸಾಮ್ರಾಜ್ಯ ಉಳಿಸಲು ಶಿವಾಜಿ ಮಹಾರಾಜರ ಪಾತ್ರ ದೊಡ್ಡದು. ತಮ್ಮ ಹೃದಯದಲ್ಲಿ ಛಲ, ಧೈರ್ಯ ಎಲ್ಲವನ್ನೂ ತುಂಬಿಕೊಂಡಿದ್ದರು. ರಾಜಹಂಸಗಡ ಶಿವಾಜಿ ಮಹಾರಾಜರು ಕಟ್ಟಿದ ಕೋಟೆ. ಅಭಿವೃದ್ಧಿಗಾಗಿ 2008ರಲ್ಲೇ ಬಿ.ಎಸ್ ಯಡಿಯೂರಪ್ಪ ಅನುದಾನ ನೀಡಿದ್ರು. 2008ರಲ್ಲೇ 4.5 ಕೋಟಿ ರೂಪಾಯಿ ಬಿಡುಗಡೆ ಆಗಿತ್ತು. ಕೋಟೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ಕೊಡ್ತೇನೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿವಾಜಿ ಮೂರ್ತಿ ಉದ್ಘಾಟನೆ ಕ್ರೆಡಿಟ್ ಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಭಾರೀ ಪೈಪೋಟಿ ಇತ್ತು. ಸದ್ಯ ಇಂದು ಸಿಎಂ ಬಸವರಾಜ ಬೊಮ್ಮಾಯಿ ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಇತ್ತ ಹೆಬ್ಬಾಳ್ಕರ್ ರಮೇಶ್ ಗೆ ತಿರುಗೇಟು ನೀಡಲು ಮಾ.5ರಂದು ಮತ್ತೊಮ್ಮೆ ಉದ್ಘಾಟನೆ ಮಾಡಲಿದ್ದಾರೆ.