ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಅವರು ಧಾರಾವಾಹಿವೊಂದರ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎರಡು ಆಪರೇಷನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ನಟ ಮಂಡ್ಯ ರಮೇಶ್ ಅವರು ರಮೇಶ್ ಅರವಿಂದ್ ನಿರ್ಮಾಣ ಮಾಡುತ್ತಿರುವ ‘ಆಸೆ’ ಸೀರಿಯಲ್‌ನಲ್ಲಿ ಪ್ರಮುಖ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿಕಿತ್ಸೆ ಪಡೆದಿರುವ ಮಂಡ್ಯ ರಮೇಶ್ ಅವರಿಗೆ ಒಂದು ತಿಂಗಳ ಕಾಲ ರೆಸ್ಟ್ ತಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ. ಕಿರುತೆರೆ ಮತ್ತು ಸಿನಿಮಾದಲ್ಲಿ ಸಕ್ರಿಯರಾಗಿರುವ ಮಂಡ್ಯ ರಮೇಶ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.