ಶೃಂಗೇರಿ ಶಾಸಕ ರಾಜೇಗೌಡ ಹಂಚಿದ್ದ ಕುಕ್ಕರ್ ಸ್ಫೋಟ – ಗ್ರಾಮಸ್ಥರ ಆಕ್ರೋಶ…

82
firstsuddi

ಚಿಕ್ಕಮಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಈಗಾಗಲೇ ಘೊಷಣೆಯಾಗಿದೆ. ಈ ಮಧ್ಯೆ ರಾಜಕೀಯ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಗಿಫ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಆದರೆ ಇದೀಗ ಶೃಂಗೇರಿ ಶಾಸಕರೊಬ್ಬರು ನೀಡಿದ್ದ ಕುಕ್ಕರ್ ಸ್ಫೋಟಗೊಂಡಿದೆ.

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ತಮ್ಮ ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಂಚಿದ್ದರು. ಅಂತೆಯೇ ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮದಲ್ಲಿ ದೇವರಾಜ್ ಎಂಬುವರ ಮನೆಯಲ್ಲಿ ತರಕಾರಿ ಬೇಯಿಸಲು ಇಟ್ಟಿದ್ದಾಗ ಕುಕ್ಕರ್ ಸ್ಫೋಟಗೊಂಡಿದೆ. ತಾಯಿ, ಮಗು ಹೊರಗಡೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಳಪೆ ಕುಕ್ಕರ್ ನೀಡಿ ಜನರ ಜೀವದ ಜೊತೆ ಚಲ್ಲಾಟ ಆಡ್ತಿದ್ದಾರೆಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ 450 ರೂ. ಕುಕ್ಕರ್ ಗೆ 1,399 ಲೇಬಲ್ ಅಂಟಿಸಿ ಕಾಂಗ್ರೆಸ್ ಕೊಟ್ಟಿದೆ ಎಂದು ರೊಚ್ಚಿಗೆದ್ದಿದ್ದಾರೆ.