ಶ್ರೀಮುರಳಿ ಅಭಿನಯದ ‘ಬಘೀರ’ ಸಿನಿಮಾದ ಟ್ರೇಲರ್ ಬಿಡುಗಡೆ.

14

ಶ್ರೀಮುರಳಿ ನಾಯಕನಾಗಿ ಅಭಿನಯಿಸಿರುವ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಡಾ.ಸೂರಿ ಅವರು ನಿರ್ದೇಶನದ ‘ಬಘೀರ’ ಸಿನಿಮಾ ವರ್ಷಗಳಿಂದಲೂ ಚಿತ್ರೀಕರಣ ನಡೆಸಲಾಗುತಿತ್ತು. ಶ್ರೀಮುರಳಿಗೆ ಆದ ಗಾಯಗಳು ಇನ್ನಿತರ ಹಲವು ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬಂದಿತ್ತು. ಈ ಚಿತ್ರದ ಟ್ರೇಲರ್ ಅನ್ನು ಚಿತ್ರತಂಡ ಇಂದು ರಿಲೀಸ್ ಮಾಡಿದೆ. ಸಿನಿಮಾದಲ್ಲಿ ಶ್ರೀಮುರಳಿ ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರೆ.
ನಟ ಶ್ರೀಮುರಳಿ ಅವರು ‘ಬಘೀರ’ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕ ಕೆಟ್ಟವರ ನಾಶ ಮಾಡಲು ‘ಬಘೀರ’ ನಾಗುತ್ತಾನೆ. ಅನ್ನೋದು ಟ್ರೇಲರ್‌ನಲ್ಲಿ ಗೊತ್ತಾಗಿದೆ. ಸಿನಿಮಾ ಉದ್ದಕ್ಕೂ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ಟವಾಗಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ. ಈ ಚಿತ್ರದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡಾ ರಾಮ್, ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶ್ರೀಮುರಳಿ ಅವರು ಬ್ಯಾಟ್‍ಮ್ಯಾನ್ ರೀತಿಯೂ ಕಾಣಿಸಿಕೊಳ್ಳುತ್ತಾರೆ. ಈ ಟ್ರೇಲರ್ ಕೆಲವೇ ನಿಮಿಷಗಳಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ.