ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ: ಸಚಿವ ಸಂತೋಷ್ ಲಾಡ್

27

ಹುಬ್ಬಳ್ಳಿ:  ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ ಕೊರುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಶ್ರೀರಾಮುಲು ಮೋಸ್ಟ್ ಹಂಬಲ್ ಪರ್ಸನ್. ರಾಮುಲು ವಂಡರ್ಫುಲ್ ಫ್ರೆಂಡ್. ನಾನು ರಾಮುಲು ಜೊತೆ ಮಾತನಾಡಿಲ್ಲ. ಕಾಂಗ್ರೆಸ್‍ಗೆ ಬಂದರೆ ವೈಯಕ್ತಿಕವಾಗಿ ನಾನು ಅವರನ್ನು ಸ್ವಾಗತ ಮಾಡುವೆ. ಈ ಬಗ್ಗೆ ನನಗೆ ಯಾವುದೇ ಟಾಸ್ಕ್ ಕೊಟ್ಟಿಲ್ಲ. ನಮ್ಮ ಪಕ್ಷ ಡಬಲ್ ಡೆಕ್ಕರ್ ಬಸ್ ಇದ್ದಂತೆ. ಯಾರಾದರೂ ಬರಬಹುದು ಹೋಗಬಹುದು ಎಂದು ಹೇಳಿದರು. ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. ಎರಡು ಲಕ್ಷ ಕಿರಾಣಿ ಅಂಗಡಿಗಳು ಮುಚ್ಚಿ ಹೋಗಿವೆ. ಇದನ್ನು ಯಾರಾದರೂ ಮಾತಾಡ್ತಾರಾ. ಅದೆಷ್ಟೇ ತೀರ್ಥಸ್ನಾನ ಮಾಡಿದ್ರೂ ಪಾಪ ಮಾಫಿ ಆಗಲ್ಲ. ನಾನು ಕೂಡ ಒಬ್ಬ ಹಿಂದೂ. ಪ್ರಧಾನಿ ಮೋದಿ, ಅಮಿತ್ ಶಾ ಪಾಪ ಎಲ್ಲಿ ಹೋದ್ರೂ ತೊಳೆಯೋಕೆ ಆಗಲ್ಲ. ಖರ್ಗೆ ಸಾಹೇಬರು ಹೇಳಿದ್ದು ಸರಿ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಸಚಿವ ಸಂತೋಷ್ ಲಾಡ್ ಸಮರ್ಥಿಸಿಕೊಂಡರು.