ಶ್ರೀಲಂಕಾದಲ್ಲಿ ಅರಾಜಕತೆ – ಅಧ್ಯಕ್ಷರ ಮನೆ ಮುಂದೆ ಹಿಂಸಾತ್ಮಕ ಪ್ರತಿಭಟನೆ…

36
firstsuddi

ಕೊಲಂಬೊ : ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟಿನಿಂದ ದೇಶದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಸಾರ್ವಜನಿಕರ ಆಕ್ರೋಶವು ಮಿತಿ ಮೀರಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ನಿನ್ನೆ ತಡರಾತ್ರಿ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿವಾಸದ ಮುಂಭಾಗ ಹತಾಶ ಜನರು ಪ್ರತಿಭಟನೆ ನಡೆಸಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆಗೆ ಒತ್ತಾಯಿಸಿದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕಲು ಅರೆಸೇನಾ ಪೊಲೀಸ್ ಘಟಕ, ವಿಶೇಷ ಕಾರ್ಯಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಲಾಗಿದೆ. ಶ್ರೀಲಂಕಾ ಸೇನೆಗೆ ಸೇರಿದ ಬಸ್ ಮತ್ತು ಜೀಪ್ ಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎನ್ನಲಾಗಿದೆ.

ಶ್ರೀಲಂಕಾದಲ್ಲಿ ಅಹಾರ, ಪೆಟ್ರೋಲಿಯಂ ಮತ್ತು ಅಗತ್ಯ ವಸ್ತುಗಳ ತೀವ್ರ ಕೊರತೆ ಎದುರಾಗಿದ್ದು, ಸ್ವಾತಂತ್ರ್ಯ ಸಿಕ್ಕ ನಂತರ ಇದೇ ಮೊದಲ ಬಾರಿಗೆ ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.