ಮುಂಬೈ : ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಇಡಿ ಕಸ್ಟಡಿ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿ ಇಲ್ಲಿನ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಆದೇಶಿಸಿದೆ.
ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್ ರಾವತ್ ಅವರನ್ನು ಸೋಮವಾರ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಅವರ ಇಡಿ ಕಸ್ಟಡಿ ಅವಧಿ ಮುಗಿದಿದ್ದು, ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದಲ್ಲಿ ಸಂಜಯ್ ರಾವುತ್ ಅವರ ಖಾತೆಗೆ 1 ಕೋಟಿ 6 ಲಕ್ಷ ರೂ ಹೇಗೆ ಬಂದಿದೆ?. ಎಂಬುದರ ಬಗ್ಗೆ ನಾವು ತನಿಖೆ ನಡೆಸಬೇಕಾಗಿದೆ. ಇನ್ನು ಹೆಚ್ಚಿನ ವಿಚಾರಣೆಗೊಸ್ಕರ ಅವರನ್ನು ವಶಕ್ಕೆ ನೀಡುವಂತೆ ಕೋರ್ಟ್ ನಲ್ಲಿ ಇಡಿ ಮನವಿ ಮಾಡಿತ್ತು. ಈ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.










