ಸಂಪೂರ್ಣ ಗುಣಮುಖವಾಗಿದ್ದೇನೆ, ಶೀಘ್ರವೇ ಜನಸೇವೆಗೆ ಮರಳುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

35

ಬೆಳಗಾವಿ: ದೇವರ ದಯೆಯಿಂದ ನಾನು ಸಂಪೂರ್ಣವಾಗಿ ಗುಣಮುಖವಾಗಿದ್ದೇನೆ. ವೈದ್ಯರು ಆರು ವಾರ ವಿಶ್ರಾಂತಿ ಮಾಡುವಂತೆ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಮತ್ತೆ ಪ್ರಯಾಣ ಆರಂಭಿಸುತ್ತೇನೆ. ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿಯ ಗೃಹಕಚೇರಿಯಲ್ಲಿಂದು ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಕಳೆದೊಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ. ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದೇನೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ ಅವರು ಎಲ್ಲರಿಗೂ ಕೃತಜ್ಞತೆ ಹೇಳಿದರು.