ಸಂವಿಧಾನ ತಿದ್ದುಪಡಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ…

37
firstsuddi

ಮೂಡಬಿದ್ರೆ: ಸಂವಿಧಾನ ತಿದ್ದುಪಡಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಿನ್ನೆ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಂಸದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಂಸದರ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೆಲೇರಿಯನ್ ಸಿಕ್ವೇರಾ, ಮೋಹನ್ ಕೋಟ್ಯಾನ್, ಮುಖಂಡರಾದ ರಾಜೇಶ್ ಕಡ್ಲಕೆರೆ, ಪುರಂದರ ದೇವಾಡಿಗ, ಜಯಕುಮಾರ್ ಶೆಟ್ಟಿ, ನಿತಿನ್ ಬೆಳುವಾಯಿ, ಸುರೇಶ್ ಬೋಳಾರ, ವಾಸುದೇವ ನಾಯಕ್, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು, ಗಣೇಶ್ ಕೋಣಾಜೆ, ವಿವೇಕನಂದ ಶಿರ್ತಾಡಿ, ಶಿವಾನಂದ ಪಾಂಡ್ರು, ಸಂತೋಷ್ ಶೆಟ್ಟಿ ಕೊಡಂಗಲ್ಲು ಉಪಸ್ಥಿತರಿದ್ದರು.

ಅನಂತ್ ಕುಮಾರ್ ಹೆಗಡೆ ಹೇಳಿದ್ದೇನು?
ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಹೆಗಡೆ, ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನೂ ಬೇಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ಆದ್ರೆ ನೀವೆಲ್ಲ ಇದಕ್ಕೆ ವಿಚಲಿತರಾಗಬಾರರು. ನೀವು ಯಾವದೋ ಸಾಮಾನ್ಯ ಪಕ್ಷದ ಕಾರ್ಯಕರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಎನೆನೋ ಹೇಳಿದ್ರು ಎಂದು ವಿಚಲಿತರಾಗಬಾರದು ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದೊಮ್ಮೆ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.