ಸಂಸದ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹ…

51
firstsuddi

ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ನಿನ್ನೆ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.