ಸಚಿನ್ ತೆಂಡಲ್ಕೂರ್ ಗೆ ಕೋವಿಡ್ ಪಾಸಿಟಿವ್…

268
firstsuddi

ಮುಂಬೈ : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡಲ್ಕೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕು ತಗುಲಿರುವ ವಿಚಾರವನ್ನು ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ.

ಕೊರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇಂದು ಸೋಂಕು ತಗುಲಿರೋದು ದೃಢವಾಗಿದ್ದು, ಮನೆಯ ಉಳಿದ ಸದಸ್ಯರಿಗೆ ನೆಗೆಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಸ್ವತಃ ನಾನೇ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಾರೆ.