ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ…

119
firstsuddi

ಉಡುಪಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್  ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ  ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ್ ಇಲ್ಲಿನ ಶಾಂಭವಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಅವರ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಲಾಡ್ಜ್ ಗಳಲ್ಲಿ ತಪಾಸಣೆ ನಡೆಸಿದಾಗ ಶಾಂಭವಿ ಲಾಡ್ಜ್ ನಲ್ಲಿ ಸಂತೋಷ್ ಪಾಟೀಲ್ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿಗೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೇಳಿಕೊಳ್ಳುತ್ತೇನೆ. ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್ ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾರೆ.