ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು…

119
firstsuddi

ಶಿವಮೊಗ್ಗ : ಒಂದು ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ವಿರುದ್ಧ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಹಿಂಸಾಚಾರ ನಡೆದಿತ್ತು. ಈ ಸಂದರ್ಭದಲ್ಲಿ ಸಚಿವ ಈಶ್ವರಪ್ಪ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಗರದ ರಿಯಾಜ್ ಅಹ್ಮದ್ ಎಂಬುವವರು ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಮೊದಲು ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ, ರಿಯಾಜ್ ಅಹ್ಮದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.