ಸಚಿವ ಕೋಟ ಶ್ರೀನಿವಾಸ ಪೂಜಾರಿಯಿಂದ ಸ್ವರ್ಣಾ ನದಿಗೆ ಬಾಗಿನ ಅರ್ಪಣೆ…

232
firstsuddi

ಉಡುಪಿ: ಉಡುಪಿ ಜಿಲ್ಲಾಡಳಿತ ಹಾಗೂ ನಗರಸಭೆಯ ಆಶ್ರಯದಲ್ಲಿ ಸ್ವಣಾ೯ ನದಿಗೆ ಬಾಗಿನ ಅರ್ಪಣೆ ಗುರುವಾರ ಶೀಂಬ್ರ ಸಿದ್ದಿವಿನಾಯಕ ದೇವಸ್ಥಾನ ಬಳಿಯ ಕೃಷ್ಣಾಂಗಾರಕ ಸ್ನಾನ ಘಟ್ಟದಲ್ಲಿ ನಡೆಯಿತು. ರಾಜ್ಯದ ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಂಪತಿಗಳು ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರ ಹಿನ್ನಲೆಯಲ್ಲಿ ಸ್ವರ್ಣ ನದಿಗೆ ಬಾಗಿನ ಅರ್ಪಿಸುವ ಪುಣ್ಯ ಕಾರ್ಯದಲ್ಲಿ ಭಾಗಿಯಾಗಿದ್ದೇನೆ. ಈ ಸ್ನಾನ ಘಟ್ಟ ಹಾಗೂ ದೇವಸ್ಥಾನವನ್ನು ಅಭಿವೃದ್ಧಿ ಮಾಡಬೇಕೆನ್ನುವುದು ನಮ್ಮ ರಾಜಕೀಯ ಗುರುಗಳಾದ ಡಾ|ವಿ ಎಸ್ ಆಚಾರ್ಯ ಅಚಾರ್ಯ ಅವರ ಕನಸಾಗಿತ್ತು. ಅವರ ಕನಸಿನಂತೆ ಶೀಂಬ್ರಾ ದೇವಸ್ಥಾನ, ಸ್ನಾನಘಟ್ಟವನ್ನು ಮುಜರಾಯಿ ಇಲಾಖೆಯಿಂದ ಅಭಿವೃದ್ಧಿ ಮಾಡಲಾಗುವುದು ಎಂದರು.ಈ ವೇಳೆ ಉಡುಪಿ ಶಾಸಕರಾದ ರಘುಪತಿ ಭಟ್, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.