ವಿನಯ್ ಕುಲಕರ್ಣಿ ಅವರಿಗೆ ನ.23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ…

125
firstsuddi

ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ. 23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಳೆದ ಎರಡು ದಿನಗಳಿಂದ ಸಿಬಿಐ ವಶದಲ್ಲಿದ್ದ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ನಗರದ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಿದ್ದರು. ಈ ವೇಳೆ ಸಿಬಿಐ ಅಧಿಕಾರಿಗಳು ಕುಲಕರ್ಣಿ ಅವರ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿ ನಾಶ, ಸುಳ್ಳು ದಾಖಲೆ ಸೃಷ್ಠಿ, ಪೊಲೀಸ್ ಇಲಾಖೆ ಮೇಲೆ ಒತ್ತಡ, ಹಂತಕರಿಗೆ ಆಶ್ರಯ, ಯೋಗೇಶ್ ಗೌಡ ಪತ್ನಯನ್ನು ರಾಜಕೀಯಕ್ಕೆ ಕರೆತಂದದ್ದು, ಹೀಗೆ ಹಲವಾರು ಸಾಕ್ಷಿಗಳ ದಾಖಲೆಗಳನ್ನು ಇಟ್ಟುಕೊಂಡು ವಿಚಾರಣೆ ನಡೆಸಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ವಿನಯ್ ಕುಲಕರ್ಣಿ ಅವರಿಗೆ ನವೆಂಬರ್ 23ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.