ಲಖನೌ : ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಬಾರಿಗೆ ಉತ್ತರಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ಅದ್ಧೂರಿಯಾಗಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ರಾಜ್ಯಪಾಲೆ ಆನಂದಿ ಬೆನ್ ಅಧಿಕಾರದ ಗೋಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಇವರೊಂದಿಗೆ ಒಟ್ಟು 52 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಕೇಶವ್ ಮೌರ್ಯ, ಬ್ರಜೇಶ್ ಪಾಠಕ್ ಗೆ ಡಿಸಿಎಂ ಪಟ್ಟ ಕಟ್ಟಲಾಗಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳೂ ಭಾಗಿಯಾಗಿದ್ದರು.
ಉತ್ತರ ಪ್ರದೇಶದಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರ ಉಳಿಸಿಕೊಂಡಿದೆ.










