ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ಲ : ಬಿಜೆಪಿ ಟ್ವೀಟ್ ಗೆ ಸಿದ್ದು ಗರಂ…

102
firstsuddi

ಬೆಂಗಳೂರು : ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ತಮ್ಮ ಪುತ್ರ ರಾಕೇಶ್ ಈಗ ಬದುಕಿಲ್ಲ. ಅದರ ಬಗ್ಗೆ ಮಾತನಾಡಲ್ಲ. ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ಲ ಎಂದು ಗರಂ ಆಗಿದ್ದಾರೆ.

ಬಿಜೆಪಿಯವರು ಸುಮ್ಮನೆ ಬಿಟ್ಕಾಯಿನ್ ಬಗ್ಗೆ ಮಾತಾಡ್ತಿದ್ದಾರಾ?. ಯಾಕೆ ಎಲ್ಲರೂ ರಿಯಾಕ್ಟ್ ಮಾಡ್ತಿದ್ದಾರೆ. ಏನೋ ಇದೆ ಅಂತ ಆಯ್ತಲ್ಲ. ಬೆಂಕಿ ಇಲ್ಲದೆ ಹೊಗೆಯಾಡುತ್ತಾ? ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುತ್ತಿರುವುದು ಯಾಕೆ? ಎಲ್ಲವೂ ತನಿಖೆ ಆಗಲಿ. 2013 ರಿಂದಲೂ ತನಿಖೆ ನಡೆಸಲಿ. ಆದರೆ, ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಯುವ ಕಾಂಗ್ರೆಸ್ ಚುನಾವಣಾ ವೆಬ್ಸೈಟ್ ಹ್ಯಾಕ್ ಆಗಿದೆ ಎಂಬ ವಿಚಾರ ಕುರಿತು ಮಾತನಾಡಿ, ಶ್ರೀಕಿ ಬಳಸಿಕೊಂಡು ನಲ್ಪಾಡ್ ಹ್ಯಾಕ್ ಮಾಡಿಸಿದ್ದರು ಎಂಬ ಗೃಹ ಸಚಿವರ ಆರೋಪಕ್ಕೆ ಪ್ರತಿಕ್ರಿಯೆ ನೀಡಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಹ್ಯಾಕಿಂಗ್ ಬಗ್ಗೆ ನನಗೆ ಗೊತ್ತಿಲ್ಲ. ತನಿಖೆ ನಡೆಸಲಿ, ಎಲ್ಲ ಸತ್ಯವೂ ಹೊರ ಬರಲಿದೆ ಎಂದರು.