ಸಮ್ಮಿಶ್ರ ಸರ್ಕಾರದ ಇನ್ನೆರಡು ವಿಕೆಟ್ ಪತನ, ಸಚಿವ ಎಂಟಿಬಿ ನಾಗರಾಜ್, ಶಾಸಕ ಸುಧಾಕರ್ ರಾಜೀನಾಮೆ…

206
firstsuddi

ಬೆಂಗಳೂರು : ಸಮ್ಮಿಶ್ರ ಸರ್ಕಾರದ ಇನ್ನೆರಡು ವಿಕೆಟ್ ಪತನವಾಗಿದ್ದು, ಸಚಿವ ಎಂಟಿಬಿ ನಾಗರಾಜ್ ಹಾಗೂ ಶಾಸಕ ಸುಧಾಕರ್ ಅವರು ನೇರವಾಗಿ ಸ್ಪೀಕರ್ ರಮೇಶ್ ಕುಮಾರ್ ಅವರ ಕಚೇರಿಗೆ ಭೇಟಿ ನೀಡಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಶಾಸಕ ಸುಧಾಕರ್ ಅವರು ರಾಜೀನಾಮೆ ನೀಡಿ ಹೊರಗೆ ಬರುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಸುಧಾಕರ್ ಅವರ ಕೊರಳು ಪಟ್ಟಿ ಹಿಡಿದು ಎಳೆದುಕೊಂಡು ಹೋಗಿದ್ದು, ಪಕ್ಷಕ್ಕೆ ದ್ರೋಹ ಮಾಡುತ್ತೀರ ಎಂದು ಗದ್ದಲವೇ ಸೃಷ್ಟಿ ಮಾಡಿದ್ದಾರೆ. ಬಳಿಕ ಸುಧಾಕರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ಸೇರಿ ಕೆ.ಜೆ ಜಾರ್ಜ್ ಅವರ ಕಚೇರಿಗೆ ಕರೆದುಕೊಂಡು ಹೋಗಿ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದಾರೆ.