ಸರಕಾರ ನಡೆಸುವವರು ಹೆಣದ ಮೇಲೆ ಹಣ ಮಾಡಲು ಹೋಗಬೇಡಿ : ಹೆಚ್.ವಿಶ್ವನಾಥ್.

142
firstsuddi

ಮೈಸೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು, ಪಿಎಂ ಅವರೇ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ಪ್ರತಿ ಜಿಲ್ಲೆಗೂ ಹಿರಿಯ ಐಎಎಸ್ ಅಧಿಕಾರಿಯನ್ನು ಮಾನಿಟರ್ ಮಾಡಲು ನಿಯೋಜಿಸಿ. ಅವರಿಗೆ ಈಗಾಗಲೇ ಸಾಕಷ್ಟು ಅನುಭವ ಇರುತ್ತೆ. ಕೊರೊನಾ ನಿರ್ವಹಣೆಗೆ ಅವರಿಗೆ 100 ಕೋಟಿ ರೂ. ನೀಡಿ. ಸಂಪೂರ್ಣವಾದ ಫೈನಾನ್ಸ್ ಅಧಿಕಾರ ಕೊಡಿ. ಒಂದು ಸಾವು ಆಗದಂತೆ ಅವರಿಗೆ ಎಚ್ಚರಿಕೆ ನೀಡಿ. ಇದರಿಂದ ಕೋವಿಡ್ ಕಂಟ್ರೋಲ್ ಮಾಡಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಂದು ದಿನವೂ ಡಿಸಿ ಹಳ್ಳಿಗಳ ಕಡೆ ಹೋಗಿಲ್ಲ. ಟಾಸ್ಕ್ ಪೋರ್ಸ್ ನವರೂ ಹಳ್ಳಿಗಳಿಗೆ ಹೋಗುತ್ತಿಲ್ಲ. ಯಾವ ಜಿಲ್ಲಾಧಿಕಾರಿ ಹಳ್ಳಿಗಳ ಕಡೆ ಹೋಗಿದ್ದಾರೆ ಹೇಳಿ? ಹಳ್ಳಿಗಳಲ್ಲಿ ಬೆಡ್, ಆಕ್ಸಿಜನ್ ಸಿಗದೆ ಜನ ನರಳುತ್ತ ಸಾಯುತ್ತಿದ್ದಾರೆ. ಈಗಾಗಲೇ ಹಳ್ಳಿಯಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಮೊದಲು ಇಲ್ಲಿನ ಜನರಿಗೆ ಕೊರೊನಾದಿಂದ ಮುಕ್ತಗೊಳಿಸಿ. ಎಲ್ಲ ಪವರ್ ವಿಜಯೇಂದ್ರ ಬಳಿ ಇದೆ. ಸರ್ಕಾರದ ಆಡಳಿತ ವಿಕೇಂದ್ರೀಕರಣ ಆಗಿದೆ. ಸರಕಾರ ನಡೆಸುವವರು ಹೆಣದ ಮೇಲೆ ಹಣ ಮಾಡಲು ಹೋಗಬೇಡಿ. ಶ್ರಮಿಕ ವರ್ಗದವರಿಗೆ ತಲಾ 5 ಸಾವಿರ ರೂ. ಕೊಟ್ಟು ಇನ್ನೂ 15 ದಿನ ಲಾಕ್ ಡೌನ್ ಮಾಡಿ ಎಂದು ವಿಶ್ವನಾಥ್ ಹೇಳಿದ್ದಾರೆ.

ಜಿಲ್ಲೆಯ ಡಿಸಿ ಬೆಳಗ್ಗೆ 6ರಿಂದ 8ರವರೆಗೆ ವ್ಯಾಪಾರಕ್ಕೆ ಅವಕಾಶ ಕೊಡುತ್ತೇನೆ ಅಂತಾರೆ. ದಿನವೂ ಏಕೆ ಅಂಗಡಿ ತೆರೆಯಬೇಕು. ಮಾಂಸದ ಅಂಗಡಿ ದಿನವೂ ಜನಜಾತ್ರೆ ಇರುತ್ತದೆ. ಒಂದು ತಿಂಗಳು ಮಾಂಸ ತಿನ್ನಲಿಲ್ಲ ಅಂದರೆ ಸತ್ತು ಹೋಗ್ತಾರಾ? ವಾರಕ್ಕೆ ಒಂದು ದಿನ ಮಾತ್ರ ಅವಕಾಶ ಕೊಟ್ಟು ಉಳಿದ ದಿನ ಲಾಕ್ ಡೌನ್ ಮಾಡಿ ಎಂದು ಸಲಹೆ ನೀಡಿದರು.