ಸರಳ ದೀಪೋತ್ಸವ : ದೇವಿರಮ್ಮನ ಬೆಟ್ಟಕ್ಕೆ ತೆರಳಲು ಮಾರ್ಗಸೂಚಿಗಳು…

182
firstsuddi

ಚಿಕ್ಕಮಗಳೂರು : ತಾಲ್ಲೂಕಿನ ಮಲ್ಲೇನಹಳ್ಳಿ ಬಿಂಡಿಗ ಶ್ರೀ ದೇವಿರಮ್ಮನವರ ದೀಪೋತ್ಸವ ನವೆಂಬರ್ 13 ರಿಂದ 17ರವೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಸರಳವಾಘಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.
ಭಕ್ತಾಧಿಗಳ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ನವೆಂಬರ್ 14 ರಂದು ಶ್ರೀ ದೇವೀರಮ್ಮ ಬೆಟ್ಟಕ್ಕೆ ಹತ್ತುವುದನ್ನು ಈ ವರ್ಷ ಮುಂದೂಡಲಾಗಿದೆ.
ಶ್ರೀ ದೇವಿರಮ್ಮನವರ ಬೆಟ್ಟವು ಅತ್ಯಂತ ಕಡಿದಾಗಿದ್ದು, ಬೆಟ್ಟಕ್ಕೆ ಹತ್ತುವ ಮಾರ್ಗಗಳು ತುಂಬಾ ಕಿರಿದಾಗಿರುತ್ತದೆ. ಸಾವಿರಾರು ಸಂಕ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಬೆಟ್ಟಕ್ಕೆ ಹತ್ತುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಷ್ಟ ಸಾಧ್ಯವಿದ್ದು, ಕೋವಿಡ್ ಸಾಂಕ್ರಾಮಿಕ ರೋಗವು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಈ ವರ್ಷ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯು ಜಗತ್ತನ್ನು ಕಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ರೋಗಕ್ಕೆ ತುತ್ತಾಗಿ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ರೋಗವು ಬಹುಬೇಗ/ವೇಗವಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು, ರಾಜ್ಯದ ಜನರ ಆರೋಗ್ಯದ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಮುಖಗವಸು ಧರಿಸುವಿಕೆ, ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈತೊಳೆಯುವಿಕೆ ಅಥವಾ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯಗೊಳೀಸಿ ಅನುಮತಿ ನೀಡಲು ನಿರ್ದೇಶನ ನೀಡಿದ್ದು, ಈ ಮಾರ್ಗಸೂಚಿಗಳು ನವೆಂಬರ್ 30ರ ವರೆಗೆ ಜಾರಿಯಲ್ಲಿರುತ್ತವೆ.
ಮೇಲ್ಕಂಡ ಕಾರಣಗಳ ಹಿನ್ನೆಲೆಯಲ್ಲಿ ಶ್ರೀ ದೇವಿರಮ್ಮ ಬೆಟ್ಟ ಹತ್ತುವ ಮತ್ತು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾಧಿಗಳು/ಸಾರ್ವಜನಿಕರು/ರಾಜ್ಯದ ಜನರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲಾಡಳಿತ ನೀಡುತ್ತಿರುವ ಸಲಹಾ ಟಿಪ್ಪಣಿಯನ್ನು ಪಾಲಿಸಿ ಈ ಬಾರಿ ದೇವಿರಮ್ಮನವರ ಬೆಟ್ಟ ಹತ್ತುವುದನ್ನು ಈ ವರ್ಷದ ಮಟ್ಟಿಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.