ಸರ್ಕಾರಿ ನಿವಾಸ ಕಾವೇರಿಯನ್ನು ತೊರೆದ ಯಡಿಯೂರಪ್ಪ.

56
firstsuddi

ಬೆಂಗಳೂರು: ಕುಮಾರ ಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಕಾವೇರಿಯನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ತೊರೆದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಕಾರಣ ಸರ್ಕಾರಿ ನಿವಾಸವನ್ನು ಬಿಎಸ್‌ವೈ ಖಾಲಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಖಾಸಗಿ ನಿವಾಸ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದಾರೆ.

ಬಿಎಸ್‌ವೈ 2019 ರಲ್ಲಿ ಸಿಎಂ ಆದಾಗ ಇದೇ ಕಾವೇರಿ ನಿವಾಸದಲ್ಲಿದ್ದ ಸಿದ್ದರಾಮಯ್ಯ ಆರು ತಿಂಗಳವರೆಗೂ ನಿವಾಸ ಖಾಲಿ ಮಾಡಿರಲಿಲ್ಲ. ಆದರೆ ಆರು ತಿಂಗಳು ಕಾಯಿಸಿದ್ದ ಸಿದ್ದರಾಮಯ್ಯ ಸಿಎಂ ಆದ ನಂತರ ಯಡಿಯೂರಪ್ಪನವರು ತಡ ಮಾಡದೇ ಕೇವಲ 11 ದಿನಗಳಲ್ಲೇ ಕಾವೇರಿ ನಿವಾಸವನ್ನು ತೆರವು ಮಾಡಿದ್ದಾರೆ.

ಸಿದ್ದರಾಮಯ್ಯರ ರಾಜಕೀಯ ಏಳಿಗೆಯಲ್ಲಿ ಆ ಮನೆ ಮಹತ್ವದ ಪಾತ್ರ ವಹಿಸಿದೆ. 2019ರಲ್ಲಿ ವಿಪಕ್ಷ ನಾಯಕನ ಸ್ಥಾನ ಸಿಕ್ಕಿತ್ತು. ಆದ್ದರಿಂದ ಕಾವೇರಿ ನಿವಾಸದಲ್ಲೇ ಮುಂದುವರಿದರೆ ಮತ್ತಷ್ಟು ರಾಜಕೀಯ ಉನ್ನತಿ ಸಿಗಬಹುದು ಎಂಬುದು ಸಿದ್ದರಾಮಯ್ಯ ಪತ್ನಿಯ ನಂಬಿಕೆ ಎಂದು ಹೇಳಲಾಗಿತ್ತು. ಇದರ ಜೊತೆ ಕಾವೇರಿ ಪಕ್ಕದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಇರುವುದರಿಂದ ಕಾವೇರಿಯಲ್ಲಿ ಸಿಎಂ ಇದ್ದರೆ ಓಡಾಟ ಸುಲಭ ಎನ್ನುವ ಲೆಕ್ಕಾಚಾರದಲ್ಲಿ ಕಾವೇರಿ ನಿವಾಸವನ್ನು ಸಿಎಂಗೆ ನೀಡಲಾಗಿದೆ.